ಹೊಸದಿಗಂತ ವರದಿ ಗದಗ:
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಹೊಂಬಳ ಗ್ರಾಮದಲ್ಲಿ ಜರುಗಿದೆ.
ಸಾಲ ಬಾಧೆ ತಾಳದೆ ಡಿ.1ರಂದು ಜಮೀನಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ರೈತ ಚಂದ್ರಶೇಖರ್ ಸಂಕಮ್ಮನವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ವಿವಿಧ ಬ್ಯಾಂಕ್ ಗಳಿಂದ ಎರಡು ಲಕ್ಷ ರೂ. ಸಾಲ ಮಾಡಿದ್ದರು. ಸಾಲ ಬಾಧೆ ಹಾಗೂ ಈರುಳ್ಳಿ, ಮೆಣಸಿನಕಾಯಿ ಬೆಳೆ ನಷ್ಟದಿಂದಾಗಿ ಕುಗ್ಗಿದ್ದ ಅವರು ವಿಷ ಸೇವಿಸಿದ್ದರು.