ದಿಗಂತ ವರದಿ ಕಲಬುರಗಿ:
ಮೆಡಿಕಲ್ ಸೀಟ್ ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.
ಶ್ವೇತಾ ಅಪ್ಪಾಸಾಬ್ ಗುಣಾರಿ (20) ಎಂಬ ನವ ಯುವತಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದು,ನೀಟ್ ಪರೀಕ್ಷೆ ಬರೆದರು ಕೂಡ ಮೆಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.