ಹೊಸದಿಗಂತ ರಾಯಚೂರು :
ಐಪಿಎಲ್ ಬೆಟ್ಟಿಂಗ್ ನಿಂದ ಸಾಲಕ್ಕೆ ತುತ್ತಾಗಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ಜರುಗಿದೆ.
ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಎನ್ನುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗುರುತಿಸಲಾಗಿದೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕಟ್ಟಲು ವಿಪರೀತ ಸಾಲ ಮಾಡಿಕೊಂಡಿದ್ದ ಮುದಿಬಸವ ಸಾಲ ತೀರಿಸಲಾಗದೆ ಹಣ ನೀಡಿದವರ ಕಾಟ ತಾಳಲಾರದೆ ಸಿಂಧನೂರು ಲಾಡ್ಜ್ ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಐಪಿಎಲ್ ಬೆಟ್ಟಿಂಗನಿಂದ ಲಕ್ಷ ಲಕ್ಷ ಕಳೆದುಕೊಂಡಿದ್ದ ಇವನು ಕೆಲ ದಿನಗಳಿಂದ ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮುದಿಬಸವ ಕೊನೆಗೆ ನೇಣಿಗೆ ಶರಣಾಗಿದ್ದಾನೆ.
ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.