ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ತೀವ್ರವಾಗಿದ್ದು. ಈ ನಡುವೆ ಗೃಹ ಸಚಿವ ಪರಮೇಶ್ವರ್ ಅವರಿಂದ ರಾಜೀನಾಮೆ ಮಾತು ಬಂದಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಿಮ್ಮ ಮನಸಿನ ಆಕಾಂಕ್ಷೆಯಂತೆ ಸ್ಪಂಧಿಸಲು ಆಗುತ್ತಿಲ್ಲ. ಆದರೆ ಸಮಯ ನನ್ನ ಕೈಯಲ್ಲಿ ಇಲ್ಲ. ನೀವೆಲ್ಲಾ ದೊಡ್ಡ ಮನುಸ್ಸು ಮಾಡಿ ಒಂದೇ ಮಾತಲ್ಲಿ ಹೇಳಿಬಿಟ್ರೆ ನಾಳೇನೆ ರಾಜೀನಾಮೆ ಕೊಡುತ್ತೇನೆ. ಆಗ ನಾನು ನಿಮ್ಮ ಜೋತೆಯಲ್ಲಿ ಇರುತ್ತೆನೆ ಎಂದು ಭಾವುಕ ಮಾತುಗಳನ್ನಾಡಿದ್ದಾರೆ.