ಕಾಂಗ್ರೆಸ್ ನಿಂದ ಅನಧಿಕೃತ ಬ್ಯಾನರ್: ಡಿ.ಕೆ. ಶಿವಕುಮಾರ್‌ ಗೆ 50,000 ರೂ. ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ 50,000 ರೂ. ದಂಡ ವಿಧಿಸಲಾಗಿದೆ.

ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ‌. ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆ ವತಿಯಿಂದ ಅನುಮತಿಯನ್ನು ಪಡೆಯಾದ ಕಾರಣ . ಈ ಸಂಬಂಧ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಬೆಂಗಳೂರು ರವರಿಗೆ 50,000 ರೂ.ಗಳ ದಂಡವನ್ನು ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!