ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನುಮತಿ ಇಲ್ಲದೆ ಮನೆಯೊಂದರಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದ 26 ಮಂದಿ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿನ ದುಲ್ಹೆಪುರ್ ಗ್ರಾಮದಲ್ಲಿ ಯಾವುದೇ ಮಸೀದಿ ಇಲ್ಲ. ಹೀಗಾಗಿ ಅಲ್ಲಿನ ಮನೆಯೊಂದರಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದುದ್ದಕ್ಕೆ ಕೆಲ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೫೦೫-೨ರಲ್ಲಿ ನಮಾಜ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.