October 18, 2026
Sunday, October 18, 2026
spot_img

ಫಲಿಸದ ಪ್ರಾರ್ಥನೆ: ಬೆಸ್ಕಾಂ ಜಾಗೃತ ದಳದ ಎಸ್ಪಿ ಲಾವಣ್ಯ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಸ್ಕಾಂ ಜಾಗೃತ ದಳದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಲಾವಣ್ಯ (39) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕೊಲೊನ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಲಾವಣ್ಯ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಲಾವಣ್ಯ ಅವರಿಗೆ ಇತ್ತೀಚೆಗೆ ಅನಾರೋಗ್ಯ ಸಮಸ್ಯೆ ಹೆಚ್ಚಾಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

2010ರ ಬ್ಯಾಚ್‌ನ ಕೆಎಸ್‌ಪಿಎಸ್ ಅಧಿಕಾರಿಯಾಗಿದ್ದ ಅವರು, ಮಂಡ್ಯ, ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್, ಡಿಸಿಆರ್‌ಇ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. 2023 ರಿಂದ ಬೆಸ್ಕಾಂ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚೆಗೆ ಲಾವಣ್ಯ ಅವರ ವಿದ್ಯಾರಣ್ಯಪುರ ನಿವಾಸಕ್ಕೆ ಡಿಜಿ ಸಲೀಂ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು.

Must Read