ಪ್ರಧಾನಿ ಮೋದಿಗೆ ಬೇಷರತ್ ಬೆಂಬಲ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ತಮ್ಮ ಪಕ್ಷದ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ.
ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!