ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾದ ಬ್ಲೋಮ್‌ಫಾಂಟೈನ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂಡರ್ 19 ವಿಶ್ವಕಪ್ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 84 ರನ್ಗಳಿಂದ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆದರ್ಶ್ ಸಿಂಗ್ ಸಿಡಿಸಿದ 76 ರನ್ ಹಾಗೂ ನಾಯಕ ಉದಯ್ ಸಹರಾನ್ ಅವರ 64 ರನ್ಗಳ ಕೊಡುಗೆಯಿಂದಾಗಿ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು.
ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಪೂರ್ಣ 50 ಓವರ್ಗಳನ್ನು ಆಡಲಾಗದೆ 45.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಲಷ್ಟೇ ಶಕ್ತವಾಯಿತು.