ಅಂಡರ್ 19 ವಿಶ್ವಕಪ್‌: ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾಕ್ಕೆ 214 ರನ್​ಗಳ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಡರ್ 19 ವಿಶ್ವಕಪ್‌ನ (U19 World Cup 2024) ಸೂಪರ್ ಸಿಕ್ಸ್ ಸುತ್ತಿನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿದ್ದ ಭಾರತ ಯುವ ಪಡೆ (India U-19 vs New Zealand U-19), ಈ ಪಂದ್ಯವನ್ನು ಬರೋಬ್ಬರಿ 214 ರನ್​ಗಳ ಅಂತರದಿಂದ ಗೆದ್ದುಕೊಂಡಿದೆ.
ಇದರೊಂದಿಗೆ ಈ ಟೂರ್ನಿಯಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.

ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತ ಕಲೆ ಹಾಕಿತು. ತಂಡದ ಪರ ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಮುಶೀರ್ ಖಾನ್ ಟೂರ್ನಿಯಲ್ಲಿ ಸತತ ಎರಡನೇ ಶತಕ ಸಿಡಿಸಿದರೆ ಆರಂಭಿಕ ಆಟಗಾರ ಆದರ್ಶ್ ಸಿಂಗ್ ಕೂಡ 52 ರನ್‌ಗಳ ಇನ್ನಿಂಗ್ಸ್‌ ಆಡಿದರು. ಈ ಇಬ್ಬರ ಆಟದ ಸಲುವಾಗಿ ಭಾರತ 50 ಓವರ್‌ಗಳಲ್ಲಿ ಎಂಟು ವಿಕೆಟ್‌ ಕಳೆದುಕೊಂಡು 295 ರನ್ ಗಳಿಸಿತು. ಮುಶೀರ್ 126 ಎಸೆತಗಳಲ್ಲಿ 13 ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 131 ರನ್ ಗಳಿಸಿದರು. ಆ ಬಳಿಕ ಬೌಲಿಂಗ್​ನಲ್ಲೂ ಮಿಂಚಿದ ಮುಶೀರ್, ಕಿವೀಸ್ ಪಾಳಯದ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತ ನೀಡಿದ 296 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಈ ಗುರಿಯ ಸಮೀಪವೂ ಬರಲು ಸಾಧ್ಯವಾಗದೆ ಕೇವಲ 81 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ ಟೀಂ ಇಂಡಿಯಾ ಈ ಪಂದ್ಯವನ್ನು 214 ರನ್‌ಗಳಿಂದ ಗೆದ್ದುಕೊಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!