ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯಲ್ಲಿ ಗುರುವಾರ ರಾತ್ರಿ ಕಟ್ಟಡ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
ಉತ್ತರ ದ್ವಾರಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ದೇವಿ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.