ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಬಿಬಿಎಂಪಿ ಅಧಿಕಾರಿ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರಿನ ನಗರದ ಹೆಣ್ಣೂರು ಬಳಿ ಇರುವ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.

ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್​ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಮೇಲ್ನೋಟಕ್ಕೆ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!