ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಣ ಹಂತದಲ್ಲಿದ್ದ ಮೋರಿ ಕುಸಿದು ಐವರು ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು ಇರುವುದು ದುರಂತದ ಸಂಗತಿ.
ಕಲ್ಯಾಣಸಿಂಗ್‌ಪುರ ಬ್ಲಾಕ್‌ನ ಉಪರಸಜ ಗ್ರಾಮದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮೋರಿ ಪ್ರಸ್ತುತ ನಿರ್ಮಾಣ ಹಂತದಲ್ಲಿದ್ದು, ಮೋರಿಯ ಕೆಳಗೆ ಶೇಖರಣೆಯಾದ ಮಳೆನೀರಿನಲ್ಲಿ ಮಕ್ಕಳು ಸ್ನಾನ ಮಾಡುತ್ತಿದ್ದರು. ಸ್ನಾನ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿ ಪರಿಣಾಮ ನಾಲ್ವರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅವಶೇಷಗಳಡಿಯಲ್ಲಿದ್ದ ಮೃತ ದೇಹಗಳನ್ನು ಹೊರತೆಗೆಯಲಾಯಿತು. ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿತ್ತು. ಐವರ ಸಾವು ಗ್ರಾಮದಲ್ಲಿ ಸೂತಕದ ವಾತಾರೌರಣ ಮೂಡಿಸಿದೆ.