ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: 20 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಆನೇಕಲ್‌ನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, 20 ಕಾರ್ಮಿಕರು ಗಾಯಗೊಂಡಿದ್ದಾರೆ.

ಕಟ್ಟಡದ ಅವಶೇಷಗಳಡಿ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ಇದೆ, ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆನೇಕಲ್ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ. ಈವರೆಗೂ ಯಾವುದೇ ಸಾವಿನ ಮಾಹಿತಿ ದೊರೆತಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!