ಕುಕ್ಕೆ ದೇವಳದ ಆಶ್ರಯದಲ್ಲಿ ನಡೆಯಿತು ಯೋಗ ದಿನಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ. ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ವಿಶ್ವ ಇದನ್ನು ಅನುಸರಿಸುತ್ತಿದೆ.ದೇವತೆಯ ಆರಾಧನೆಗೆ ಯೋಗಾಸನವನ್ನು ಬಳಸಲಾಗುತ್ತದೆ. ಸೂರ್ಯನ ಪೂಜನೆಮಾಡುವ ಸೂರ್ಯ ನಮಸ್ಕಾರ ಅತ್ಯಂತ ಶ್ರೇಷ್ಠವಾದ ಆಸನವಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ರಯದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ, ನೌಕರರ ವೃಂದ, ಎಸ್‌ಎಸ್‌ಪಿಯು ಕಾಲೇಜು ಸುಬ್ರಹ್ಮಣ್ಯ, ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯದ ಸಹಯೋಗದಲ್ಲಿ ಮಂಗಳವಾರ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್‌ಎಸ್‌ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್.ಜೆ , ಭಾರತವು ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ಯೋಗ. ಸುಂದರವಾದ ಜೀವನ ನಡೆಸುವ ಮೂಲಕ ಆರೋಗ್ಯ ವೃದ್ಧಿಯಾಗಲು ಯೋಗ ಅಡಿಗಲ್ಲು ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಮನೋಹರ ರೈ, ಶೋಭಾ ಗಿರಿಧರ್,ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಚಂದ್ರಶೇಖರ್ ಮರ್ದಾಳ, ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ಪ್ರೌಢಶಾಲಾ ಮುಖ್ಯಗುರು ಕೆ.ಯಶವಂತ ರೈ, ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲ ದಿನೇಶ್ ಉಪಸ್ಥಿತರಿದ್ದರು.
ರಥಬೀದಿಯಲ್ಲಿ ಯೋಗ :
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ರಥಬೀದಿಯಲ್ಲಿ ಯೋಗಾಸನ ಮಾಡುವ ಯೋಗ ಪ್ರಥಮಬಾರಿಗೆ ದೊರಕಿತು. ಸುಮಾರು 700ಕ್ಕೂ ಅಧಿಕ ಮಂದಿ ಏಕಕಾಲದಲ್ಲಿ ಯೋಗಾಸನ ಮಾಡಿದರು. ಯೋಗ ಗುರುಗಳಾದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್ ಮತ್ತು ಶ್ರೀ ದೇವಳದ ಸಿಬ್ಬಂಧಿ ಬಾಲಕೃಷ್ಣ.ಆರ್ ಯೋಗಾಭ್ಯಾಸ ಮಾಡಿಸಿದರು. ಸಹಾಯಕ ಆಯುಕ್ತರು, ಶ್ರೀ ದೇವಳದ ಆಡಳಿತ ಮಂಡಳಿ, ಶ್ರೀ ದೇವಳದ ಸಿಬ್ಬಂಧಿಗಳು, ಎಸ್‌ಎಸ್‌ಪಿಯು ಕಾಲೇಜು, ಕೆಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳು ಸುಮಾರು 1 ಗಂಟೆಗಳ ಕಾಲ ವಿವಿಧ ಆಸನಗಳನ್ನು ಮಾಡಿದರು.ಅಲ್ಲದೆ ಯೋಗಾಸನವನ್ನು ದಿನಚರಿಯನ್ನಾಗಿ ಪ್ರತಿದಿನಮಾಡುವ ಪ್ರತಿಜ್ಞೆ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!