ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ.
ಸದ್ಯ ಪ್ರಾಥಮಿಕ ಮಾಹಿತಿ ಅನ್ವಯ ವಿಷ ಸೇವನೆ ಅಥವಾ ಊಟದಲ್ಲಿ ವಿಷ ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ. ಕರಾಚಿಯ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ದಾವೂದ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಉನ್ನತ ಅಧಿಕಾರಿಗಳು ಹಾಗೂ ಕುಟುಂಬದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಇತ್ತೀಚೆಗಷ್ಟೇ ದಾವೂದ್ ಸಹೋದರಿಯ ಪುತ್ರ ದಾವೂದ್ ಎರಡನೇ ಮದುವಾಗಿ ಕರಾಚಿಯಲ್ಲಿ ಇದ್ದಾರೆ ಎಂದು ಹೇಳಿದ್ದ. ಪಾಕ್ ಭದ್ರತಾ ಪಡೆಗಳ ನೆರಳಿನಲ್ಲಿ ದಾವೂದ್ ಆಶ್ರಯ ಪಡೆದಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.