Thursday, January 8, 2026

ವ್ಯತ್ಯಾಸ ಅರ್ಥಮಾಡಿಕೊಳ್ಳಿ…ಕೇಂದ್ರ ಸರಕಾರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂಬಂಧ ಮತ್ತು ಸುಂಕಗಳ ಕುರಿತು ಮಾಡಿದ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

X ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ‘ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಿ, ಸರ್ ಜಿ!’ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕ ತಮ್ಮ ಹಳೆಯ ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಕರೆಯ ನಂತರ ಪ್ರಧಾನಿ ಮೋದಿ “ಶರಣಾಗತರಾದರು” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

1971 ರ ಯುದ್ಧದಲ್ಲಿ ಅಮೆರಿಕ ತನ್ನ ಏಳನೇ ನೌಕಾಪಡೆಯನ್ನು ಕಳುಹಿಸಿದರೂ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹಿಂದೆ ಸರಿಯಲಿಲ್ಲ, ಇದು ವ್ಯತ್ಯಾಸ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪರ್ಕ ಉಸ್ತುವಾರಿ ಜೈರಾಮ್ ರಮೇಶ್ ಕೂಡ ಪ್ರಧಾನಿಯನ್ನು ಟೀಕಿಸಿದ್ದಾರೆ. “ನಮಸ್ತೆ ಟ್ರಂಪ್ ನಿಂದ ಹೌಡಿ ಮೋದಿ ವರೆಗೆ ಡೊನಾಲ್ಡ್ ಭಾಯ್ ವರೆಗೆ, ಈಗ ಇದು. ಮುಂದೇನು?” ಎಂದು ಪ್ರಶ್ನಿಸಿದ್ದಾರೆ.

error: Content is protected !!