ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರತ್ನಗಿರಿಯಲ್ಲಿರುವ ಭಯೋತ್ಪಾದಕ ದಾವೂದ್ ಇಬ್ರಾಹಿಂನ (Dawood Ibrahim) ಬಾಲ್ಯದ ಮನೆ ಮತ್ತು ಆತನ ಕುಟುಂಬದ ಒಡೆತನದ ಇತರ ಮೂರು ಆಸ್ತಿಗಳನ್ನು ಶುಕ್ರವಾರ ಹರಾಜು ಮಾಡಲಾಗುತ್ತದೆ.
ಸ್ಮಗ್ಲರ್ಸ್ ಮತ್ತು ಫಾರಿನ್ ಎಕ್ಸ್ಚೇಂಜ್ ಮ್ಯಾನಿಪ್ಯುಲೇಟರ್ಸ್ (ಆಸ್ತಿ ಮುಟ್ಟುಗೋಲು) ಕಾಯಿದೆ (SAFEMA) ಅಡಿಯಲ್ಲಿ ಅಧಿಕಾರಿಗಳು ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಜನವರಿ 5 ರಂದು ಮುಂಬೈನಲ್ಲಿ ಹರಾಜು ನಡೆಯಲಿದೆ.
ಕಳೆದ ಒಂಬತ್ತು ವರ್ಷಗಳಲ್ಲಿ ದಾವೂದ್ ಅಥವಾ ಆತನ ಕುಟುಂಬಕ್ಕೆ ಸೇರಿದ 11 ಆಸ್ತಿಗಳನ್ನು ಹರಾಜು ಮಾಡಲಾಗಿದೆ. 4.53 ಕೋಟಿ ರೂ.ಗೆ ರೆಸ್ಟೋರೆಂಟ್ ಮಾರಾಟ ಮಾಡಲಾಗಿದೆ. 3.53 ಕೋಟಿ ರೂ. ಆರು ಫ್ಲಾಟ್ಗಳು ಮತ್ತು 3.52 ಕೋಟಿ ರೂ.ಗೆ ಅತಿಥಿ ಗೃಹ ಕೂಡ ಮಾರಾಟವಾಗಿದೆ.
1993 ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ 1983 ರಲ್ಲಿ ಮುಂಬೈಗೆ ತೆರಳುವ ಮೊದಲು ಮುಂಬಾಕೆ ಗ್ರಾಮದಲ್ಲಿ ವಾಸಿಸುತ್ತಿದ್ದ. 257 ಜನರ ಸಾವಿಗೆ ಕಾರಣವಾದ ಸರಣಿ ಬಾಂಬ್ ಸ್ಫೋಟದ ನಂತರ ಭಾರತ ತೊರೆದಿದ್ದನು.