ಕೇರಳದ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣ ಏರಿಕೆ: ದೇಶದಲ್ಲಿ ಎರಡನೇ ಸ್ಥಾನ ಪಡೆದ ದೇವರ ಸ್ವಂತ ನಾಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ರಾಜ್ಯದ ನಗರ ಪ್ರದೇಶಗಳಲ್ಲಿ ನಿರೋದ್ಯೋಗ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಅಂಶ ಕೇಂದ್ರದ ಅಂಕಿ ಅಂಶ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಲ್ಲಿ ಬಹಿರಂಗವಾಗಿದೆ.

ಡಿಸೆಂಬರ್ ತಿಂಗಳಿಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೇರಳದ ನಗರ ಪ್ರದೇಶಗಳಲ್ಲಿನ ನಿರುದ್ಯೋಗ ಪ್ರಮಾಣ ಶೇ.10.3ಕ್ಕೆ ಏರಿಕೆಯಾಗಿರುವುದನ್ನು ಈ ಅಂಕಿಅಂಶಗಳು ಸ್ಪಷ್ಟಪಡಿಸುತ್ತಿವೆ.

ನಿರುದ್ಯೋಗ ಪ್ರಮಾಣದಲ್ಲಿ ಹಿಮಾಚಲ ಪ್ರದೇಶದಲ್ಲಿ 12.3% ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಹರಿಯಾಣ ಅತ್ಯಂತ ಕಡಿಮೆ ಅಂದರೆ 3.1% ಪ್ರಮಾಣದಲ್ಲಿದೆ. ನಿರುದ್ಯೋಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕೇರಳ ಎರಡನೇ ಸ್ಥಾನದಲ್ಲಿದೆ.

ಇನ್ನು ಆಂಧ್ರಪ್ರದೇಶ 8%, ತಮಿಳುನಾಡು 6.7%, ಕರ್ನಾಟಕ 3.6% ಪ್ರಮಾಣ ದಾಖಲಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!