ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಯುನೆಸ್ಕೋದ ವಿಶೇಷ ವಿಶ್ವ ಮನ್ನಣೆ: ಇದು ಭಾರತಕ್ಕೆ ಹೆಮ್ಮೆ ಎಂದ ಪ್ರಧಾನಿ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಯುನೆಸ್ಕೋದ ವಿಶೇಷ ವಿಶ್ವ ಮನ್ನಣೆ ದೊರಕಿದ್ದು, ಪ್ರಧಾನಿ ‌ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಇದಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮೆಚ್ಚುಗೆ ಬರೆದ ಅವರು, ಜಗತ್ತಿನ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಇದೂ ಒಂದು ಎಂಬ ಕೀರ್ತಿಗೆ ನಮ್ಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ ಎಂದು ಕಳೆದ ವರ್ಷ ಟರ್ಮಿನಲ್ ಕಟ್ಟಡ ಉದ್ಘಾಟನೆಯ ಫೋಟೋಗಳನ್ನ ಶೇರ್‌ ಮಾಡಿ ಮೋದಿ ಹರ್ಷವನ್ನ ವ್ಯಕ್ತಪಡಿಸಿದ್ದಾರೆ. ಉತ್ಸಾಹಭರಿತ ನಗರದ ಜೊತೆಗೆ ವಾಸ್ತುಶಿಲ್ಪದಲ್ಲಿ ತನ್ನ ಜಾಣ್ಮೆಯನ್ನ ಇಲ್ಲಿ ತೋರಿಸಲಾಗಿದೆ. ಇದು ಭಾರತಕ್ಕೆ ಹೆಮ್ಮೆ ಎಂದು ಪ್ರಧಾನಿಗಳು ಶ್ಲಾಘಿಸಿದ್ದಾರೆ.

‘ಶ್ಲಾಘನೀಯ ಸಾಧನೆ! ಬೆಂಗಳೂರಿನ ಜನತೆಗೆ ಅಭಿನಂದನೆಗಳು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಕೇವಲ ರೋಮಾಂಚಕ ನಗರವಾದ ಬೆಂಗಳೂರಿನ ಹೆಬ್ಬಾಗಿಲು ಮಾತ್ರವಲ್ಲದೆ, ವಾಸ್ತುಶಿಲ್ಪದ ವೈಭವದ ಪ್ರದರ್ಶನವಾಗಿದೆ. ಈ ಸಾಧನೆಯು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಕಲಾತ್ಮಕ ಸೌಂದರ್ಯದೊಂದಿಗೆ ಸಂಯೋಜಿಸುವಲ್ಲಿ ದೇಶದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಕಳೆದ ವರ್ಷ ಟರ್ಮಿನಲ್ ಕಟ್ಟಡದ ಉದ್ಘಾಟನೆಯ ಝಲಕ್ ಇಲ್ಲಿದೆ’ ಎಂದು ಪ್ರಧಾನಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!