ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಕೇಂದ್ರಕ್ಕೆ ದಾಳಿ ನಡೆಸಿದ ಪೊಲೀಸರು ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.
ನಾಲ್ವರು ಮಹಿಳೆಯರು ಮತ್ತು ನಾಲ್ವರು ಪುರುಷರು ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದರು. ಯಾನ್ವಿ ಹೆಸರಿನ ಮನೆಯಲ್ಲಿ ವಾಸವಾಗಿರುವ ಬೊಳಂತೂರು ಎತ್ತಿಕೋಡಿಯ ರುಕಿಯಾ (50) ಅವರು ಈ ಅನೈತಿಕ ಚಟುವಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ವೇಳೆ 3 ದ್ವಿಚಕ್ರ ವಾಹನಗಳು, 9 ಮೊಬೈಲ್ 5 ಸಾವಿರ ನಗದು, ಸೇರಿದಂತೆ ಒಟ್ಟು ರೂ.1.76,5800 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪ ವಿಭಾಗ ರವರ ಮಾರ್ಗದರ್ಶನದಂತೆ ಈ ಪತ್ತೆ ಕಾರ್ಯದಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಹಾಗೂ ಪಿ.ಎಸ್.ಐ – ಮಂಜುಳಾ ಎಲ್. ಉಳ್ಳಾಲ ಠಾಣಾ ಸಿಬ್ಬಂದಿಗಳಾದ ಮಂಜುನಾಥ ಎನ್, ವಾಸುದೇವ ಚವ್ಹಾಣ್, ದಾಕ್ಷಾಯಿಣಿ, ಲಕ್ಷ್ಮೀ ಹಾಗೂ ಎಸಿಪಿ ಸ್ಕ್ಯಾಡ್‌ನ ಸಿಬ್ಬಂದಿ ರೆಜಿ ಭಾಗವಹಿಸಿದ್ದರು.