ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೆಕ್ಸ್ ಸನ್ರೈಸ್ ಇಂಡಿಯಾ ಓಪನ್ ಟೂರ್ನಿಯ ಕ್ವಾರ್ಟರ್ ಫೈನಲ್ ಗೆ ಪಿ.ವಿ.ಸಿಂಧು ಮತ್ತು ಹೆಚ್.ಎಸ್.ಪ್ರಣಯ್ ಪ್ರವೇಶಿಸಿದ್ದು, ಸೈನಾ ನೆಹ್ವಾಲ್ 2ನೇ ಸುತ್ತಿನ ಪಂದ್ಯದಲ್ಲೇ ಸೋಲು ಕಂಡು ನಿರಾಶೆ ಅನುಭವಿಸಿದ್ದಾರೆ.
ಸೈನಾ 17-19, 9-21ರ ಅಂತರದಲ್ಲಿ ಭಾರತದವರೇ ಆದ 111 ಶ್ರೇಯಾಂಕದ ಮಾಳವಿಕಾ ಬನ್ಸೋದ್ ವಿರುದ್ಧ ಸೋಲೊಪ್ಪಿಕೊಂಡರು.
ಪಿ.ವಿ.ಸಿಂಧು ಭಾರತದ ಸಹ ಶಟ್ಲರ್ ಇರಾ ಶರ್ಮಾ ವಿರುದ್ಧ 21-0, 21-10 ಗೇಮ್ಗಳ ಅಂತರದಲ್ಲಿ ಗೆಲುವು ಸಾಧಿಸಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದರು. ಟೂರ್ನಿಯಲ್ಲಿ ಅಗ್ರ ಶ್ರೇಯಾಂಕ ಪಡೆದಿರುವ ಸಿಂಧು, ತಮ್ಮ ಮುಂದಿನ ಸುತ್ತಿನಲ್ಲಿ ಆಶ್ಮಿತಾ ಚಹಿಲಾ ವಿರುದ್ಧ ಸೆಣಸಾಡಲಿದ್ದಾರೆ.
ಇತ್ತ ಆಶ್ಮಿತಾ ತಮ್ಮ 2ನೇ ಸುತ್ತಿನ ಪಂದ್ಯದಲ್ಲಿ ಫ್ರಾನ್ಸ್ನ ಯೆಲ್ಲೆ ಹೊಯಾಕ್ಸ್ ವಿರುದ್ಧ 21-17, 21-14ರ ಅಂತರದಲ್ಲಿ ಗೆಲುವು ಸಾಧಿಸಿ 8ರ ಘಟ್ಟಕ್ಕೆ ಪ್ರವೇಶ ಪಡೆದರು.
ಪುರುಷರ ವಿಭಾಗದಲ್ಲಿ ಮಿಥುನ್ ಮಂಜುನಾಥ್ ಕೋವಿಡ್ ಸೋಂಕು ಕಾರಣಕ್ಕೆ ಟೂರ್ನಿಯಿಂದ ಹಿಂದೆ ಸರಿದಿರುವುದರಿಂದ ಪ್ರಣಯ್ ಸುಲಭವಾಗಿ ಕ್ವಾರ್ಟರ್ ಫೈನಲ್ಸ್‌ಗೆ ಎಂಟ್ರಿ ಕೊಟ್ಟರು.