ಅನಿವಾರ್ಯ ಸಂದರ್ಭ, ಲಾಜಿಸ್ಟಿಕ್ ಸಮಸ್ಯೆ: CSIR-UGC NET ಪರೀಕ್ಷೆ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

CSIR UGC-NET ಪರೀಕ್ಷೆಯನ್ನು ಅನಿವಾರ್ಯ ಸಂದರ್ಭಗಳು ಮತ್ತು ಲಾಜಿಸ್ಟಿಕ್ ಸಮಸ್ಯೆಗಳಿಂದ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ.

25.06.2024 ರಿಂದ 27.06.2024 ರ ನಡುವೆ ನಡೆಯಬೇಕಿದ್ದ ಜೂನ್-2024 ರ ಜಂಟಿ CSIR-UGC-NET ಪರೀಕ್ಷೆಯನ್ನು ಅನಿವಾರ್ಯ ಸಂದರ್ಭಗಳು ಮತ್ತು ಲಾಜಿಸ್ಟಿಕ್ ಸಮಸ್ಯೆಗಳಿಂದ ಮುಂದೂಡಲಾಗುತ್ತಿದೆ ಎಂದು ಅಭ್ಯರ್ಥಿಗಳಿಗೆ ಈ ಮೂಲಕ ತಿಳಿಸಲಾಗಿದೆ. ಈ ಪರೀಕ್ಷೆಯ ನಿರ್ವಹಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ನಂತರ ಪ್ರಕಟಿಸಲಾಗುವುದು ಎಂದು ಎನ್‌ಟಿಎ ಹೇಳಿಕೆಯಲ್ಲಿ ತಿಳಿಸಿದೆ.

ಸಹಾಯಕ ಪ್ರಾಧ್ಯಾಪಕರ ಅರ್ಹತೆ, ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿನ ಪಿಎಚ್‌ಡಿ ಕೋರ್ಸ್‌ಗಳಿಗೆ ಪ್ರವೇಶವನ್ನು ನಿರ್ಧರಿಸಲು ನಡೆಸುವ ಯುಜಿಸಿ-ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಗೊಳಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆಯಾಗಿದೆ.

ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆಯಾಗಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬಹಿರಂಗಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!