ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಸಿಸಾಬಾ ಕೊರೊಸಿ ಅವರು ಮಂಗಳವಾರ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಲಿದ್ದಾರೆ.
“ಭಾರತದ ಕರ್ನಾಟಕದಲ್ಲಿರುವ ಬೆಂಗಳೂರಿಗೆ ಆಗಮಿಸಿದ್ದೇನೆ. ಇಂದು ನಾನು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು, ನಾಗರಿಕ ಸಮಾಜ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ನೀರು ಮತ್ತು ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಭೇಟಿ ನೀಡುತ್ತೇನೆ” ಎಂದು UNGA ಅಧ್ಯಕ್ಷ ಕ್ಸಾಬಾ ಕೊರೊಸಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಭೇಟಿಗೂ ಮುನ್ನ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿದ್ದರು.