ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತನ ಶವ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಬೆಂಗಳೂರಿನಲ್ಲಿ ಮತ್ತೊಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವುದು ಬುಧವಾರ ವರದಿಯಾಗಿದೆ.

ನಗರದ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಈ ಸ್ಥಳದಲ್ಲಿ ಗುಜರಿ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಇಲ್ಲಿ ಹಳೆಯ ಕಾರೊಂದನ್ನು ನಿಲ್ಲಿಸಲಾಗಿದ್ದು, ಕಾರಿನಲ್ಲಿ ಅಪರಿಚಿತ ವ್ಯಕ್ತಿ ರಾತ್ರಿ ಮಲಗಿರುವ ಹಾಗೂ ಕಾರಿಗೆ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರು ಅರೆಬರೆ ಸುಟ್ಟಿದ್ದು, ವ್ಯಕ್ತಿ ಸಜೀವ ದಹನ ಆಗಿದ್ದಾನೆ ಎಂದು ಅನುಮಾನಿಸಲಾಗಿದೆ. ಕೊಲೆಯ ಕುರಿತು ತನಿಖೆ ಮಾಡಲಾಗುತ್ತಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಕೊಲೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!