ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ರಾಜಧಾನಿ ಇಂಫಾಲ್‌ನ ಏರ್‌ಪೋರ್ಟ್ ವಾಯುಪ್ರದೇಶದಲ್ಲಿ ಅಪರಿಚಿತ ಡ್ರೋನ್ ಹಾರಾಟ ಕಂಡಿಬಂದಿದ್ದು, ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಬೀರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಅಪರಿಚಿತ ಡ್ರೋನ್ ಹಾರಾಟ ಕಾಣಿಸಿದ್ದು, ಇಂಫಾಲ್‌ನಿಂದ ಹೊರಡುವ ವಿಮಾನಗಳನ್ನು ರದ್ದುಗೊಳಿಸಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.