ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಫ್ಲೈಓವರ್ ನಿಂದ ಕೆಳಗೆ ಬಿದ್ದು ಸವಾರ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪರಿಚಿತ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಫ್ಲೈಓವರ್ ಮೇಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಪ್ರಸಾದ್ ಮೃತ ಯುವಕ ಎಂದು ಗುರುತಿಸಲಾಗಿದೆ.

ಜಾಲಹಳ್ಳಿ ಮುಖ್ಯರಸ್ತೆಯ ಮುಂಭಾಗದ ಮೇಲ್ಸೇತುವೆಯಲ್ಲಿ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪೀಣ್ಯ ಫೈ ಓವರ್ ಮೇಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಕುರಿತು ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!