March 31, 2026
Tuesday, March 31, 2026
spot_img

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಹಿಮಂತ ಶರ್ಮಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ವಿಧಾನ ಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಈ ಬಾರಿ ಮತ್ತೆ ಅಧಿಕಾರಕ್ಕೇರಲು ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಯತ್ನಪಡುತ್ತಿದ್ದು, ಬಿಜೆಪಿ ಗೆದ್ದರೆ ಮೂರೇ ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರ್ಮಾ, ರಾಜ್ಯದಲ್ಲಿ ಜನಾಂಗೀಯ ಸಮುದಾಯಗಳ ಹಕ್ಕುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯುಸಿಸಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ರಾಜ್ಯದಲ್ಲಿ ನಾವು ಲವ್ ಜಿಹಾದ್ ವಿರುದ್ಧ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 2 ಲಕ್ಷ ಉದ್ಯೋಗಗಳನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಜನರಿಗೆ ಯಾವುದೇಂ ರೀತಿಯ ತೊಂದರೆ ಆಗದಂತೆ ಒಂದು ಜಿಲ್ಲೆ, ಒಂದು ವೈದ್ಯಕೀಯ ಕಾಲೇಜು, ಒಂದು ವಿಶ್ವವಿದ್ಯಾಲಯ, ಒಂದು ಎಂಜಿನಿಯರಿಂಗ್ ಕಾಲೇಜು ಯೋಜನೆ ಜಾರಿಗೆ ತರುತ್ತೇವೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !