ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಪಿಯುಸಿ ಬೋರ್ಡ್ ಆದೇಶಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ವಸ್ತ್ರ ಸಂಹಿತೆ ಕುರಿತು ಹೊರಡಿಸಿರುವ ಸರ್ಕಾರದ ಆದೇಶದ ಪ್ರಕಾರ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಧರಿಸತಕ್ಕದ್ದು.ಖಾಸಗಿ ಶಾಲೆಗಳಲ್ಲಿ ಆಯಾ ಶಾಲಾಮಂಡಳಿ ನಿಗದಿಪಡಿಸಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.
ಉಚ್ಚ ನ್ಯಾಯಾಲಯದ ಇತರೆ ಸಂಬಂಧಿತ ಪ್ರಕರಣಗಳಲ್ಲಿ 15-03-22 ರಂದು ನೀಡಿರುವ ತೀರ್ಪಿನಲ್ಲಿ ಮೇಲೆ ಪ್ರಸ್ತಾಪಿಸಿದ ಸರ್ಕಾರದ ಆದೇಶವನ್ನು ಸಿಂಧುಗೊಳಿಸಿರುತ್ತದೆ.ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ದಿ ಸಮಿತಿ ಅಥವಾ ಶಾಲಾಮಂಡಳಿಯ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂದು ಸರ್ಕಾರ ಸೂಚಿಸಿದೆ.
ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 22-04-22 ರಿಂದ 18-05-22 ರವರೆಗೆ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!