ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರದ ಬಗ್ಗೆ ಮಾತನಾಡಿದ್ದಾರೆ.
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ ಒಟಿಟಿ ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.