ಕುಮಾರಸ್ವಾಮಿ ಪತ್ರಕ್ಕೆ ಸಿಕ್ಕಿತು ಕೇಂದ್ರ ಕೃಷಿ ಸಚಿವರ ಸ್ಪಂದನೆ: ಮಾವು ಬೆಳೆಗಾರರಿಗೆ ಪರಿಹಾರ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬರೆದಿರುವ ಪತ್ರಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದು, 2025 26ನೇ ಸಾಲಿನ ಮಾವು ಬೆಳೆಗಾರ ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಲ್ ಮಾವಿಗೆ 1,616 ರೂಪಾಯಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಒಟ್ಟು 2,50,000 ಮೆಟ್ರಿಕ್ ಟನ್ ಮಾವಿಗೆ ಇದೀಗ ಪರಿಹಾರ ಘೋಷಣೆ ಮಾಡಿದ್ದಾರೆ. ಎಂ ಎಸ್ ಐ ಯೋಜನೆಯ ಅಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ.

ಮಾವು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.

ಕಳೆದ 22 ದಿನಗಳಿಂದ ರಾಜ್ಯದಲ್ಲಿ ಮಾವು ಬಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು.ನಾವು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಇಂದು ಕೋಲಾರದಲ್ಲಿ ಚೆನ್ನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ರಸ್ತೆ ಮಧ್ಯದಲ್ಲಿಯೇ ಮಾವಿನ ಕಾಯಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಇದೀಗ ಹೆಚ್ ಡಿ ಕುಮಾರಸ್ವಾಮಿ ಬರೆದ ಪತ್ರಕ್ಕೆ ಕೇಂದ್ರ ಕೃಷಿ ಸಚಿವರು ಸ್ಪಂದನೆ ನೀಡಿದ್ದು ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!