RECRUITMENT | ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 42 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 42 ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಕನಿಷ್ಟ 25 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಾಮಾನ್ಯ ಅರ್ಜಿದಾರರು 850/-ರೂ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!