ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಬೆಂಬಲ ನೀಡಲು, ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು 1.07 ಲಕ್ಷ ಕೋಟಿ ರೂ.ಗಳ ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಅನುಮೋದಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ವರ್ಷಗಳಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಪ್ರೋತ್ಸಾಹ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!