ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಇಂದು ದಿಢೀರ್ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದು, ಇದೀಗ ಸಭೆ ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಿದೆ.
ಪ್ರಮುಖವಾಗಿ ಮಹಿಳಾ ಮೀಸಲಾತಿ ಮಸೂದೆ ಸೇರಿದಂತೆ ನಾಳೆ ಮಂಡನೆಯಾಗಲಿರುವ ಮಸೂದೆಗಳ ಕುರಿತು ಚರ್ಚಿಸಿ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದ ಮೂಲಗಳು ಹೇಳಿವೆ.
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ. ಆದರೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಕೆಲವು ಪ್ರತಿಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ಮಂಡಿಸಲು ಒತ್ತಾಯಿಸಿತ್ತು.