spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇಂದ್ರ ಸಚಿವ ಸಂಪುಟ ಸಭೆ: 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆ

- Advertisement -Nitte

ಹೊಸ ದಿಗಂತ ಡಿಟಿಟಲ್‌ ಡೆಸ್ಕ್:‌

ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಕೈಗೊಂಡಿದ್ದು, 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಿಸೋದಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ‘ಉಚಿತ ಪಡಿತರ ಒದಗಿಸುವ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನ ಮಾರ್ಚ್ 2022 ರವರೆಗೆ ವಿಸ್ತರಿಸಲು ಸಂಪುಟ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಸಮಯದಲ್ಲಿ 2020 ರ ಮಾರ್ಚ್ʼನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅನ್ನು ಘೋಷಿಸಿದ್ದರು. ಇನ್ನು ಈ ಯೋಜನೆಯನ್ನು ಆರಂಭದಲ್ಲಿ ಏಪ್ರಿಲ್-ಜೂನ್ 2020ರ ಅವಧಿಗೆ ಪ್ರಾರಂಭಿಸಲಾಯಿತು. ಆದ್ರೆ, ನಂತ್ರ ನವೆಂಬರ್ 30 ರವರೆಗೆ ವಿಸ್ತರಿಸಲಾಯಿತು. ಈಗ ಸರ್ಕಾರ ಮತ್ತೊಮ್ಮೆ 2022ರ ಮಾರ್ಚ್ ವರೆಗೆ ಉಚಿತ ಪಡಿತರ ಒದಗಿಸಲು ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss