ದೆಹಲಿಯಲ್ಲಿ ಮಳೆ, ಪ್ರತಿಕೂಲ ಹವಾಮಾನ: ರಾಜ್‌ನಾಥ್‌ ಸಿಂಗ್‌ ಪ್ರಯಾಣಿಸುತ್ತಿದ್ದ ವಿಮಾನದ ಮಾರ್ಗ ಬದಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಸುರಿಯುತ್ತಿದೆ. ಮಳೆ ಕಾರಣದಿಂದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ 11 ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಗಿದೆ. ಪ್ರತಿಕೂಲ ಹವಾಮಾನವಿದ್ದುದರಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿದ್ದ ವಿಮಾನದ ಮಾರ್ಗವನ್ನೂ ಬದಲಿಸಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.
ರಕ್ಷಣಾ ಸಚಿವ ರಾಜ್‌ ನಾಥ್‌ ಸಿಂಗ್‌ ಶುಕ್ರವಾರ ಗುಜರಾತ್‌ನ ವಡೋದರಾದ ಶ್ರೀ ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದೆಹಲಿಗೆ ಹಿಂತಿರುಗುತ್ತಿದ್ದರು. ದೆಹಲಿಯಲ್ಲಿ ಏರ್ಪಟ್ಟ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಮಾನ ಸೇರಿದಂತೆ ಒಟ್ಟಾರೆ 11 ವಿಮಾನಗಳನ್ನು ಅಹಮದಾಬಾದ್, ಜೈಪುರ, ಲಕ್ನೋ ಮತ್ತು ಆಗ್ರಾದತ್ತ ತಿರುಗಿಸಲಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!