Tuesday, June 28, 2022

Latest Posts

ರಾಜ್ಯಸಭೆ ಚುನಾವಣೆ| ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜೂನ್‌ 10 ರಂದು 15 ರಾಜ್ಯಗಳಲ್ಲಿ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್‌ ಇಂದು(ಮೇ 31) ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಿತ್ತ ಸಚಿವೆ ಜೊತೆ ನಟ ಜಗ್ಗೇಶ್‌ ಹಾಗೂ ಲೆಹರ್‌ ಸಿಂಗ್‌ ಕೂಡಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ನಟ ಜಗ್ಗೇಶ್‌ ಗವಿಗಂಗಾಧರೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ದೇವಸ್ಥಾನದಿಂದ ನೇರವಾಗಿ ಗೋಸಾಯಿ ಮಹಾಸಂಸ್ಥಾನ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದರು.

ಸೀತಾರಾಮನ್‌ಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವರು, ಸಂಸದರು, ಶಾಸಕರು ಈ ಸಂದರ್ಭದಲ್ಲಿ ಸಾಥ್‌ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss