Monday, September 22, 2025

ರಾಷ್ಟ್ರಪತಿ ದೌಪದಿ ಮರ್ಮು ಭೇಟಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದೌಪದಿ ಮರ್ಮು ಅವರನ್ನು ಭಾನುವಾರ ಭೇಟಿಯಾದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿ ಭವನವು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಆದರೆ, ಯಾವ ವಿಚಾರದ ಬಗ್ಗೆ ಮಾತುಕತೆ ನಡೆದಿದೆ ಎಂಬುದರ ಮಾಹಿತಿ ನೀಡಿಲ್ಲ.

ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಶೇ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಮತ್ತು ರಾಷ್ಟ್ರಪತಿ ಭೇಟಿ ನಡೆದಿರುವುದು ಮಹತ್ವ ಪಡೆದುಕೊಂಡಿದೆ

ಇದನ್ನೂ ಓದಿ