Wednesday, February 8, 2023

Latest Posts

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಪಾಂಡ್ಯ ಬ್ರದರ್ಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಮ್ ಇಂಡಿಯಾದ ಕ್ರಿಕೆಟ್​ ಸಹೋದರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃಣಾಲ್ ಪಾಂಡ್ಯ ಅವರು ಭೇಟಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್ ಪಾಂಡ್ಯ ಹಂಚಿಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವರೊಂದಿಗೆ ಅಮೂಲ್ಯ ಸಮಯವನ್ನು ಕಳೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ‘ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ನಮ್ಮ ಪಾಲಿನ ಸೌಭಾಗ್ಯ’ ಎಂದು ಪಾಂಡ್ಯ ಹೇಳಿದ್ದಾರೆ.

ಅಮಿತ್‌ ಶಾ ಭೇಟಿಯ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ‘ನಮ್ಮನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯ ಕ್ಷಣಗಳನ್ನು ಕಳೆದ ಗೃಹಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು ನಮ್ಮ ಸೌಭಾಗ್ಯ ಹಾಗೂ ಗೌರವದ ವಿಚಾರ ಎಂದು ಹೇಳಿದ್ದಾರೆ.

ಅಮಿತ್​ ಶಾ ಮತ್ತು ಪಾಂಡ್ಯ ಬ್ರದರ್ಸ್‌ ಗುಜರಾತ್ ಮೂಲದವರಾಗಿರುವುದರಿಂದ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಇವರ ಭೇಟಿಯನ್ನು ಕೆಲವರು ರಾಜಕೀಯ ಕ್ಷೇತ್ರಕ್ಕೆ ಹೋಲಿಕೆ ಮಾಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!