Wednesday, February 1, 2023

Latest Posts

3 ದಿನ ರಾಜ್ಯ ಪ್ರವಾಸ ಕೈಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 29 ರಿಂದ 31 ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಮೂರು ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ .
ಡಿಸೆಂಬರ್ 29ರಂದು ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ.ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ, 30, ಶುಕ್ರವಾರದಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15 ರವರೆಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ಅವರು ಮಂಡ್ಯಕ್ಕೆ ಭೇಟಿ ನೀಡಲಿದ್ದು, 1.45ಕ್ಕೆ ಸರ್ಕಾರಿ ಬಾಲಕರ ಕಾಲೇಜಿಗೆ ತೆರಳಲಿರುವ ಅವರು, 3.15ರವರೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 5.20ಕ್ಕೆ ಯಲಹಂಕಕ್ಕೆ ತೆರಳಲಿರುವ ಸಚಿವರು ಸಂಜೆ 5.45ರಿಂದ 6.45ರವರೆಗೆ ಅರಮನೆ ಮೈದಾನದಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಡಿ, 31, ಶನಿವಾರದಂದು ದೇವನಹಳ್ಳಿಯ ಆವತಿಯಲ್ಲಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಮಧ್ಯಾಹ್ನ 3ರಿಂದ 4.30 ರವರೆಗೆ ಬಿಜೆಪಿ ಬೂತ್ ಅಧ್ಯಕ್ಷರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಡಿ.31 ರಂದು ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!