ಲೋಕಸಭೆಯಲ್ಲಿ ಹೊಸ ಕ್ರಿಮಿನಲ್ ಕಾನೂನು ಮಸೂದೆ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರು ಮಂಗಳವಾರ ಭಾರತೀಯ ನ್ಯಾಯ (2ನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (2ನೇ) ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಿ (2ನೇ) ಮಸೂದೆ, 2023 ಅನ್ನು ಮಂಡಿಸಿದ್ದಾರೆ.

ಕ್ರಿಮಿನಲ್ ಪ್ರೊಸೀಜರ್ ಆಕ್ಟ್, 1898, ಭಾರತೀಯ ದಂಡ ಸಂಹಿತೆ, 1860, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್, 1872 ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ ಮಸೂದೆಗಳನ್ನು ಲೋಕಸಭೆಯಲ್ಲಿ ಆಗಸ್ಟ್‌ನಲ್ಲಿ ಪರಿಚಯಿಸಲಾಯಿತು.

ಕಳೆದ ವಾರ ಕೆಳಮನೆಯಲ್ಲಿ ಬಿಲ್‌ಗಳ ತಿದ್ದುಪಡಿ ಮಾಡಿದ ಆವೃತ್ತಿಗಳನ್ನು ಪರಿಚಯಿಸಲಾಯಿತು. ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆ, 2023 ಎಂಬ ಹೊಸ ಮಸೂದೆಗಳನ್ನು ಮಂಗಳವಾರ ಮಧ್ಯಾಹ್ನ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!