ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ ಎಂದು ಹೇಳಲಾಗಿದೆ.
ಬೆಳಗ್ಗೆ 11:30 ಕ್ಕೆ ಹೆಚ್‌ಎಲ್ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಆಗಮಿಸಲಿದ್ದಾರೆ. ರಸ್ತೆ ಮಾರ್ಗವಾಗಿ ತೆರಳಿ ಜಯನಗರದಲ್ಲಿ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟಿಸಲಿದ್ದಾರೆ.
ಅಮಿತ್ ಶಾ ಬೆಂಗಳೂರಿಗೆ ಆಗಮಿಸುವ ವೇಳೆ ವಿಮಾನ ನಿಲ್ದಾಣದಲ್ಲಿ ಬಿಜೆಪಿಯ 15 ಮುಖಂಡರು ಹಾಜರಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಪಕ್ಷದ ನಾಯಕರು, ಮುಖಂಡರು ಉಪಸ್ಥಿತರಿರಲಿದ್ದಾರೆ.