ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಹಾರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯಲ್ಲಿ ಅವರು ಸಂಘಟನಾತ್ಮಕ ಸಭೆ, ಮೈತ್ರಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದು, ಸಾರ್ವಜನಿಕ ಸಭೆಯಲ್ಲೂ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಈಗಾಗಲೇ ಬಿಜೆಪಿ ತಮ್ಮ ಹಂಚಿಕೆಯ 101 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು. ಈ ಪ್ರವಾಸದ ವೇಳೆ ಕೆಲವು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಅಮಿತ್ ಶಾ ಕೂಡ ಹಾಜರಿರುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಕುರಿತು ಮಾತನಾಡಿರುವ ಬಿಜೆಪಿಯ ಹಿರಿಯ ನಾಯಕ, ಎನ್ಡಿಎ ಮೈತ್ರಿಯ ಎಲ್ಲ ಘಟಕಗಳಿಗೆ ಅಭ್ಯರ್ಥಿಗಳನ್ನು ಗುರುವಾರ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕು ದಿನದಲ್ಲಿ ಎಲ್ಲ 243 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದೆ. ಎನ್ಡಿಎ ಪಾಲುದಾರರಲ್ಲಿ ಉತ್ತಮ ಸಮನ್ವಯ ಖಚಿತಪಡಿಸಿಕೊಳ್ಳಲು ಪಕ್ಷದ ಎಲ್ಲ ನಾಯಕರಿಗೆ ಶಾ ಸೂಚನೆಗಳನ್ನು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.