Monday, July 4, 2022

Latest Posts

ಇಂದು ದಾವಣಗೆರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದಾವಣಗೆರೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇಂದು ಮಧ್ಯಾಹ್ನ 2:50 ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಆಗಮಿಸಲಿದ್ದು, ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಬಳಿಯ ಸ್ಕೌಟ್ಸ್ ಆಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡಲಿದ್ದಾರೆ. ಗ್ರಾಮದ ಹೊರ ವಲಯದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆ ಮಾಡಲಿದ್ದಾರೆ. ತದನಂತರ ಜಿಎಂಐಟಿ ಕಾಲೇಜು ಆವರಣದಲ್ಲಿ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss