ಜಮ್ಮು& ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್ 4 ರಿಂದ ಎರಡು ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
2019 ರ ಆಗಸ್ಟ್‌ನಲ್ಲಿ ಮೋದಿ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಅಮಿತ್ ಶಾ ಅವರ ಎರಡನೇ ಭೇಟಿ ಇದಾಗಿದೆ.

ಅ.03 ರ ಮಂಗಳವಾರ ರಜೌರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಮೂಲಕ ಅಮಿತ್ ಶಾ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಬೆಳಿಗ್ಗೆ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಶಾ ಜಮ್ಮುವಿನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಅಕ್ಟೋಬರ್ 5 ರಂದು ಶ್ರೀನಗರದ ರಾಜಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಶಾ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ, ಅರೆಸೇನಾ ಪಡೆಗಳು, ರಾಜ್ಯ ಪೊಲೀಸ್ ಮತ್ತು ನಾಗರಿಕ ಆಡಳಿತದ ಉನ್ನತ ಅಧಿಕಾರಿಗಳು ಕೇಂದ್ರ ಸಚಿವರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!