Friday, March 1, 2024

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹೋದರಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಶಾ ಸೋಮವಾರ ಮಹಾರಾಷ್ಟ್ರದ ರಾಜಧಾನಿ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು.

ಈ ಹಿನ್ನೆಲೆ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಗುಜರಾತ್ ನಲ್ಲಿ ಭಾಗವಹಿಸಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ .
ರಾಜೇಶ್ವರಿಬೆನ್ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕೆಲವು ತಿಂಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು ಎಂದು ವರದಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!