Sunday, October 1, 2023

Latest Posts

ʻನಮೋʼ ಹುಟ್ಟುಹಬ್ಬ: ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಗಣ್ಯರ ಶುಭಾಶಯ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅನೇಕ ಸೆಲೆಬ್ರಿಟಿಗಳು ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿಶನ್ ರೆಡ್ಡಿ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು… ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ʻತಮ್ಮ ದೂರದೃಷ್ಟಿ, ದಣಿವರಿಯದ ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಮತ್ತು ನಂಬಿಕೆಯನ್ನು ತಂದ ದೇಶದ ಹೆಸರಾಂತ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆʼ ಎಂದು ಅಮಿತ್‌ ಸಾ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಿಶನ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತ.. ದೇಶದ ಅಭಿವೃದ್ಧಿ ಹಾಗೂ ಸರ್ವಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೋದಿ ಅವರಿಗೆ ದೀರ್ಘಾಯುಷ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತೆಲಂಗಾಣದ ಸಮಸ್ತ ಜನತೆಯ ಪರವಾಗಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಮೋದಿಯವರ ಆದರ್ಶಪ್ರಾಯ ನಾಯಕತ್ವದಲ್ಲಿ ಭಾರತ ಎಲ್ಲ ರೀತಿಯಲ್ಲೂ ಅಭೂತಪೂರ್ವ ಎತ್ತರಕ್ಕೆ ಬೆಳೆದಿದೆ ಎಂದರು. ಮೋದಿ ದೀರ್ಘಾಯುಷ್ಯರಾಗಿ ದೇಶದ ಯುವಜನತೆಗೆ ಸ್ಪೂರ್ತಿ ತುಂಬುತ್ತಾ ಭಾರತ ಮಾತೆಯ ಸೇವೆ ಮಾಡಬೇಕೆಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!