ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅಮಿತ್​ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಈ ವೇಳೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಪಡೆದರು. ಜೊತೆಗೆ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾ ಅವರನ್ನು ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್ ಪುಷ್ಪಗುಚ್ಚ ನೀಡುವ ಮೂಲಕ ಸ್ವಾಗತಿಸಿದರು.

ತದನಂತರ ಅಮಿತ್‌ ಶಾ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ಅವರು, ಪ್ರಾರ್ಥನೆಯನ್ನು ಸಲ್ಲಿಸಿದರು. ಬಳಿಕ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣ ಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣಕ್ಕೆ ತೆರಳಿದರು. ಅಲ್ಲಿಂದ ಭರ್ಜರಿ ರೋಡ್ ಶೋ ಅನ್ನು ನಡೆಸಲಿದ್ದಾರೆ.

ಬಿಜೆಪಿ ತನ್ನ ಸ್ಥಾನವನ್ನು ಹಳೆ ಮೈಸೂರು ಭಾಗದಲ್ಲಿ ಭದ್ರಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಜೆಪಿ ಚಾಣಕ್ಯ ರಣತಂತ್ರದೊಂದಿಗೆ ಮೈಸೂರಿಗೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!