ಹೊಸದಿಗಂತ ವರದಿ,ಮೈಸೂರು :
ಕೇಂದ್ರ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಭೇಟಿಗೆಂದು ಫೆ.10 ರಂದು ಮೈಸೂರಿಗೆ ಆಗಮಿಸಲಿದ್ದಾರೆ.
ಶನಿವಾರ ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ರಸ್ತೆ ಮಾರ್ಗವಾಗಿ ಮೃಗಾಲಯದ ಬಳಿಯಯಿರುವ ಪಂಚತಾರಾ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಫೆ.11 ರಂದು ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಿ, ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಊಟ ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ.
ನಂತರ ಮಧ್ಯಾಹ್ನ 2.40ಕ್ಕೆ ಬಿಜೆಪಿ ನಾಯಕರು, ಮುಖಂಡರೊoದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಮೈಸೂರಿನಿಂದ ನಿರ್ಗಮಿಸಲಿದ್ದಾರೆ.