Monday, March 27, 2023

Latest Posts

ತಡರಾತ್ರಿ ಹುಬ್ಬಳ್ಳಿಗೆ ಬಂದಿಳಿದ ಅಮಿತ್‌ ಶಾ: ಇಂದು ಬೃಹತ್‌ ರೋಡ್‌ ಶೋ

ಹೊಸದಿಗಂತ ವರದಿ ಹುಬ್ಬಳ್ಳಿ:‌ 

ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಬಿಎಸ್ಎಫ್ ವಿಶೇಷ ವಿಮಾನದಲ್ಲಿ ಬಂದಿಳಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ವಿಮಾನ ನಿಲ್ದಾಣದಿಂದ ನೇರವಾಗಿ ಡೆನಿಸನ್ಸ್ ಹೋಟೆಲ್‌ಗೆ ತೆರಳಿದ ಅಮಿತ್‌ ಶಾ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ, ಇಂದು ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿ.ವಿ.ಭೂಮರಡ್ಡಿ ಕಾಲೇಜಿನ 75ನೇ ವರ್ಷದ ಪ್ಲಾಟಿನಂ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ನಂತರ ಧಾರವಾಡದಲ್ಲಿ ನೂತನವಾಗಿ ತಲೆಯೆತ್ತಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಶಾಖೆಗೆ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!